ಗಣ್ಯರಿಗೆ ಆಮಂತ್ರಣ ನೀಡಿದ ಸ್ಟಾರ್​​ ಜೋಡಿ

ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಆಗಸ್ಟ್ 24ಕ್ಕೆ ಮದುವೆ ನಡೆಯುತ್ತಿದೆ.  ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಇದೀಗ ಈ ಜೋಡಿ ಗುರು ಹಿರಿಯರ ಸಮ್ಮುಖದಲ್ಲಿ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ. ಈ ಜೋಡಿ, ಇದೀಗ ತಮ್ಮ ಮದುವೆಗೆ ಗಣ್ಯರನ್ನು ಆಹ್ವಾನಿಸುತ್ತಿದೆ.

ಸ್ಟಾರ್​​ ನಟ ಹಾಗೂ ನಟಿಯರ ಮದುವೆಗೆ ಸಾಕಷ್ಟು ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಕೊಡವ ಸಂಪ್ರದಾಯದಂತೆ ಭುವನ್ ಹಾಗೂ ಹರ್ಷಿಕಾ ಅವರ ಮದುವೆ ನಡೆಯಲಿದೆ. ಅದಕ್ಕಾಗಿ ವಿರಾಜಪೇಟೆಯ ಅಮ್ಮತಿ ಕೊಡವ ಸಮಾಜದಲ್ಲಿ ಮದುವೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ.

ಇನ್ನು ಈ ಜೋಡಿ ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ಗಣ್ಯರನ್ನು ಮದುವೆಗೆ ಆಹ್ವಾನಿಸಿದೆ.

ಶಿವರಾಜ್ ಕುಮಾರ್, ರವಿಚಂದ್ರನ್, ಗಣೇಶ್, ಹಿರಿಯ ನಟ ದೊಡ್ಡಣ್ಣ, ಶ್ರೀನಾಥ್ ಜಯಮಾಲ, ಸುಧಾರಾಣಿ, ತಾರಾ, ಮಾಲಾಶ್ರೀ, ಅನುಪ್ರಭಾಕರ್, ಅಮೂಲ್ಯ, ದಿಗಂತ್, ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ, ದುನಿಯಾ ವಿಜಯ್, ನಟಿ ಅಮೂಲ್ಯ ದಂಪತಿ ಸೇರಿದಂತೆ ಅನೇಕ ಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *