ಗಳಿಕೆಯಲ್ಲಿ ಭರ್ಜರಿ ದಾಖಲೆ ಮಾಡಿದ ‘ಅನಿಮಲ್‌’

ಮುಂಬೈ: ಅನಿಮಲ್‌ ಸಿನಿಮಾ ಕಲೆಕ್ಷನ್‌ ವಿಚಾರದಲ್ಲಿ ದೊಡ್ಡ ಮಟ್ಟದಲ್ಲಿ ಕಮಾಲ್‌ ಮಾಡುತ್ತಿದೆ. ಇದೀಗ ಈ ಚಿತ್ರ ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಐದು ದಿನಕ್ಕೆ 481 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ ಎಂದು ನಿರ್ಮಾಪಕರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಅಂದರೆ, 500 ಕೋಟಿ ರೂಪಾಯಿ ಕ್ಲಬ್​ ಸೇರಲು ಇನ್ನು 19 ಕೋಟಿ ರೂಪಾಯಿ ಮಾತ್ರ ಬಾಕಿ. 6ನೇ ದಿನ ಕೂಡ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಹಾಗಾಗಿ ಅನಾಯಾಸವಾಗಿ ಈ ಸಿನಿಮಾಗೆ 500 ಕೋಟಿ ರೂಪಾಯಿ ಹರಿದುಬಂದಿದ್ದು, ಶೀಘ್ರದಲ್ಲೇ ಅಪ್​ಡೇಟ್​ ಸಿಗಲಿದೆ.

ರಣಬೀರ್​ ಕಪೂರ್​ ಅವರ ವೃತ್ತಿಜೀವನದಲ್ಲಿ ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಅನಿಮಲ್’ ಚಿತ್ರ ಪಾತ್ರವಾಗಿದೆ. ಅನಿಲ್​ ಕಪೂರ್​, ಬಾಬಿ ಡಿಯೋಲ್​ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ರಶ್ಮಿಕಾ ಮಂದಣ್ಣ, ತೃಪ್ತಿ ದಿಮ್ರಿ ಅವರು ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಅನೇಕ ದೃಶ್ಯಗಳು ಕ್ರೌರ್ಯದಿಂದ ಕೂಡಿವೆ ಎಂಬ ಕಾರಣಕ್ಕೆ ಕೆಲವರು ‘ಅನಿಮಲ್​’ ಸಿನಿಮಾವನ್ನು ಟೀಕಿಸುತ್ತಿದ್ದಾರೆ. ಏನೇ ಆದರೂ ಅನಿಮಲ್‌ ಸಿನಿಮಾ ಕಲೆಕ್ಷನ್‌ ವಿಚಾರದಲ್ಲಿ ದೊಡ್ಡ ಮಟ್ಟದ ಯಶಸ್ಸು ಸಾಧಿಸುತ್ತಿದೆ.

 

Font Awesome Icons

Leave a Reply

Your email address will not be published. Required fields are marked *