ಗುರುನಾನಕ್‌ ಕಾಲೇಜಿನಲ್ಲಿ ರಜತ ಮಹೋತ್ಸವ ಸಂಭ್ರಮ

ಬೀದರ್ : ನಗರದ ಗುರುನಾನಕ್‌ ಪ್ರಥಮ ದರ್ಜೆ ಕಾಲೇಜಿನ ರಜತ ಮಹೋತ್ಸವ ಕಾರ್ಯಕ್ರಮ ನಗರದಲ್ಲಿ ನಡೆಯಿತು.

ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ್‌ ಉದ್ಘಾಟಿಸಿ, ಗುರು ನಾನಕ್ ಪ್ರಥಮ ದರ್ಜೆ ಕಾಲೇಜು 25 ವರ್ಷಗಳು ಪೂರ್ಣಗೊಳಿಸಿರುವುದು ಸಂತಸದ ವಿಷಯ.ಗಡಿ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ತಂತ್ರಜ್ಞಾನ ಆಧಾರಿತ ಜ್ಞಾನ ನೀಡುತ್ತಿದೆ. ಜೊತೆಗೆ ಅನ್ನದಾಸೋಹ ಕೂಡ ಮಾಡುತ್ತಿರುವುದು ಶ್ಲಾಘನಾರ್ಹ ಎಂದರು.

‌ಬೀದರ್‌ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ .ಎಸ್. ಬಿರಾದಾರ, ಕುಲಸಚಿವ ಪ್ರೊ. ಪರಮೇಶ್ವರ ನಾಯಕ, ಗುರು ನಾನಕ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್‌. ಬಲಬೀರ್ ಸಿಂಗ್, ಉಪಾಧ್ಯಕ್ಷೆ ರೇಷ್ಮಾ ಕೌರ್‌, ಕಾಲೇಜಿನ ಪ್ರಾಂಶುಪಾಲ ಶ್ಯಾಮಲಾ ವಿ. ದತ್ತ, ಐಕ್ಯೂಎಸಿ ಸಂಯೋಜಕ ಸಂಜಯ್ ಮೈನಳ್ಳಿ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Font Awesome Icons

Leave a Reply

Your email address will not be published. Required fields are marked *