ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿವಾಕರ್ ಶೆಟ್ಟಿ ಕಾಂಗ್ರೆಸ್‌ಗೆ ಸೇರ್ಪಡೆ

ಉಡುಪಿ:   ನಿಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆ ಗೊಂಡರು.
ಇವರನ್ನು ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು ಹಾಗೂ ಪಕ್ಷದ ಅಧ್ಯಕ್ಷರಾದ ಕೆ. ಸದಾಶಿವ ದೇವಾಡಿಗ ರವರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡವವರನ್ನು ಕುರಿತು ಉದಯ ಶೆಟ್ಟಿ ಮುನಿಯಾಲು ರವರು ಮಾತನಾಡಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡು ಲೋಕಸಭಾಕ್ಷೇತ್ರದ ನಮ್ಮ ಅಭ್ಯರ್ಥಿಯಾದ ಶ್ರೀ ಜಯಪ್ರಕಾಶ ಹೆಗ್ಡೆಯವರ ಗೆಲುವಿಗೆ ಶ್ರಮಿಸುವಂತೆ ವಿನಂತಿಸಿ, ಅಭಿನಂದಿಸಿದರು.

ಸಭೆಯಲ್ಲಿ ನಿಟ್ಟೆ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ ಶೆಟ್ಟಿ,ಇ೦ಟಕ್ ತಾಲೂಕು ಅಧ್ಯಕ್ಷರಾದ ದಿವಾಕರ್, ಭಾರತ್ ಶೆಟ್ಟಿ, ರೋಬೋಟ್, ಸುಧಾಕರ ಶೆಟ್ಟಿ, ಸುಬಿತ್ ಕುಮಾರ್,ನವೀನ್ ದೇವಾಡಿಗ, ಮಧುಕರ್ ಶೆಟ್ಟಿ, ಸುನೀಲ್ ಭಂಡಾರಿ, ಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Font Awesome Icons

Leave a Reply

Your email address will not be published. Required fields are marked *