‘ಚಂದ್ರಮುಖಿ 2’ ಫಸ್ಟ್ ಲುಕ್ ರಿಲೀಸ್: ಮಹಾರಾಣಿಯಾಗಿ ಕಾಣಿಸಿಕೊಂಡ ಕಂಗನಾ

ಅತೀ ನಿರೀಕ್ಷೆ ಮೂಡಿಸಿರುವ ‘ಚಂದ್ರಮುಖಿ 2’ ಸಿನಿಮಾದ ಒಂದೊಂದೇ ಮೊದಲ ನೋಟಗಳು ಅನಾವರಣಗೊಳ್ಳುತ್ತಿವೆ. ಮೊನ್ನೆಯಷ್ಟೇ ರಾಘವ್ ಲಾರೆನ್ಸ್ ಫಸ್ಟ್ ಲುಕ್ ರಿಲೀಸ್ ಮಾಡಿತ್ತು ಚಿತ್ರತಂಡ. ಇದೀಗ ಕಂಗನಾ ರಣಾವತ್ ಅವರ ಮೊದಲ ನೋಟವನ್ನು ಬಿಡುಗಡೆ ಮಾಡಿ, ಕುತೂಹಲ ಮೂಡಿಸಿದ್ದಾರೆ ನಿರ್ದೇಶಕರು.

ಈ ಸಿನಿಮಾದಲ್ಲಿ ಕಂಗನಾ ಮಹಾರಾಣಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಕಂಗನಾ ರಣಾವತ್ ಅವರು ಇತ್ತೀಚಿಗೆ ‘ಎಮರ್ಜೆನ್ಸಿ’ ಚಿತ್ರದ ಮೂಲಕ ಹೈಪ್ ಕ್ರಿಯೇಟ್ ಮಾಡಿದ್ದರು. ಈ ಬೆನ್ನಲ್ಲೇ ತಮ್ಮ ಫ್ಯಾನ್ಸ್‌ಗೆ ಕಂಗನಾ ಸಿಹಿಸುದ್ದಿ ನೀಡಿದ್ದಾರೆ. ಚಂದ್ರಮುಖಿಯಾಗಿ ನಟಿ ಅಭಿಮಾನಿಗಳ ಮುಂದೆ ಬರೋದ್ದಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಫಸ್ಟ್ ಲುಕ್ ಮತ್ತಷ್ಟು ನಿರೀಕ್ಷೆಯನ್ನು ಹೆಚ್ಚಿಸಿದೆ.

18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರುತ್ತಿದೆ. ನಿರೀಕ್ಷೆಯನ್ನು ಹೆಚ್ಚಿಸಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ.

Font Awesome Icons

Leave a Reply

Your email address will not be published. Required fields are marked *