ನವದೆಹಲಿ: ರಷ್ಯಾದ ಲೂನಾ ಗಗನನೌಕೆ ಚಂದ್ರನ ಮೇಲೆ ಕಾಲಿಡುವಲ್ಲಿ ವಿಫಲವಾಗಿದೆ. ಆದರೆ ಭಾರತದ ಚಂದ್ರಯಾನ 3 ಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಕಾಲಿಡಲು ಕ್ಷಣಗಣನೆ ಆರಂಭವಾಗಿದ್ದು, ದೇಶವಾಸಿಗಳು ಕಾತುರದಿಂದ ಈ ಕ್ಷಣಕ್ಕೆ ಕಾಯುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ನಟ ಪ್ರಕಾಶ್ ರೈ ಹಂಚಿಕೊಂಡಿರುವ ಟ್ವಿಟರ್ ಪೋಸ್ಟ್ ಎಲ್ಲರಿಗೂ ಆಕ್ರೋಶ ಉಂಟು ಮಾಡಿದೆ.
ಚಹಾ ಮಾಡುವ ವ್ಯಕ್ತಿಯೊಬ್ಬನ ವಿರೂಪಗೊಳಿಸಿದ ಚಿತ್ರ ಹಂಚಿಕೊಂಡಿರುವ ಪ್ರಕಾಶ್ ರಾಜ್, ವಿಕ್ರಮ್ ಲ್ಯಾಂಡರ್ ಮೂಲಕ ಚಂದ್ರನಿಂದ ಬರುತ್ತಿರುವ ಮೊದಲ ಚಿತ್ರ ಎಂಬ ಕ್ಯಾಪ್ಷನ್ ಹಾಕಿದ್ದಾರೆ. ಇದು ಇಸ್ರೋಗೆ ಮಾಡಿದ ಅವಮಾನ, ದೇಶಕ್ಕೆ ಮಾಡಿದ ಅಪಮಾನ ಎಂದು ಹಲವರು ಪ್ರಕಾಶ್ ರಾಜ್ ವಿರುದ್ಧ ಕಿಡಿಕಾರಿದ್ದಾರೆ.
ತಾಜಾ ಸುದ್ದಿ :~
ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದ್ರಶ್ಯ .. #VikramLander #justasking pic.twitter.com/EWHcQxc1jA
— Prakash Raj (@prakashraaj) August 20, 2023