ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸುರೇಶ್‌ ನಾಮಪತ್ರ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಎನ್.ಎಮ್.ಸುರೇಶ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬೆಳಿಗ್ಗೆ ಫಿಲಂ ಚೇಂಬರ್‌ಗೆ ಆಗಮಿಸಿದ ಎನ್ ಎಮ್ ಸುರೇಶ್, ಡಾ. ರಾಜ್ ಕುಮಾರ್ ಪ್ರತಿಮೆಗೆ ಹಾರ ಹಾಕಿ ನಮಸ್ಕರಿಸಿ ಆ ನಂತರ ನಾಮಪತ್ರ ಸಲ್ಲಿಕೆ ಮಾಡಿದರು. ಸಾರಾ ಗೋವಿಂದ್ ಬಣ ಸೇರಿದಂತೆ ಅನೇಕ ವಿತರಕರು, ನಿರ್ಮಾಪರು ಎನ್ ಎಮ್ ಸುರೇಶ್ ಅವರಿಗೆ ಬೆಂಬಲ ನೀಡಿದ್ದಾರೆ.

ಈ ಬಾರಿಯ ಚುನಾವಣೆ ವಿಳಂಬವಾಗಿದೆ. ಅಂದುಕೊಂಡಂತೆ ಆಗಿದ್ದರೆ ಮೇ ತಿಂಗಳಲ್ಲೆ ಚುನಾವಣೆ ನಡೆದು ಫಲಿತಾಂಶ ಕೂಡ ಹೊರಬೀಳಬೇಕಿತ್ತು. ಆದರೆ ಈ ಬಾರಿ ಸೆಪ್ಟಂಬರ್‌ನಲ್ಲಿ ನಡೆಯುತ್ತಿದೆ. ಇನ್ನು ಕಳೆದ ಬಾರಿ 2022ರಲ್ಲಿ ನಡೆದ ಚುನಾವಣೆಯಲ್ಲಿ ಭಾ.ಮ. ಹರೀಶ್​ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಅವರ ಅಧಿಕಾರದ ಅವಧಿ 2023ರ ಮೇ 28ಕ್ಕೆ ಅಂತ್ಯವಾಗಿದೆ. ಹಾಗಿದ್ದರೂ ಕೂಡ ಚುನಾವಣೆ ನಡೆಸಿರಲಿಲ್ಲ. ಎ ಗಣೇಶ್, ಪ್ರಿಯಾ ಹಾಸನ್ ಇನ್ನೂ ಹಲವರು ವಿವಿಧ ಹುದ್ದೆಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *