ಚಲಿಸುತ್ತಿದ್ದ ಪೊಲೀಸ್​ ವಾಹನದಿಂದ ಜಿಗಿದ ಆರೋಪಿ ಸಾವು

ದೆಹಲಿ: ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಈಶಾನ್ಯ ದೆಹಲಿಯ ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದರು.

ಆರೋಪಿಯನ್ನು ಠಾಣೆಗೆ ಕರೆದೊಯ್ಯುವ ವೇಳೆ ಪೊಲೀಸ್ ಕಾರಿನಿಂದ ಆರೋಪಿ ಜಿಗಿದಿದ್ದಾರೆ. ಇದರಿಂದಾಗಿ ಅವರು ತೀವ್ರವಾಗಿ ಗಾಯಗೊಂಡಿದ್ದರು. ಪೊಲೀಸರು ಗಾಯಾಳುಗಳನ್ನು ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ದರು, ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಪ್ರಮೋದ್ ಎಂದು ಗುರುತಿಸಲಾಗಿದ್ದು, ಆರೋಪಿ ಪಾನಮತ್ತನಾಗಿದ್ದ ಎಂದು ಹೇಳಲಾಗುತ್ತಿದೆ. ಪೊಲೀಸ್​ ವಾಹನದಲ್ಲಿ ಕೂರಿಸಿದ ಕೂಡಲೇ ಕಿಟಕಿ ತೆರೆದು ವಾಂತಿ ಮಾಡಿಕೊಳ್ಳುವಂತೆ ಮಾಡಿ ಹೊರ ಜಿಗಿದಿದ್ದಾರೆ, ಕೂಡಲೇ ಜೆಪಿಸಿ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

Font Awesome Icons

Leave a Reply

Your email address will not be published. Required fields are marked *