ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ: ಫುಲ್ ಟ್ರಾಫಿಕ್ ಜಾಮ್. – Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

ಮೈಸೂರು,ಜನವರಿ,1,2024(www.justkannada.in): ಇಂದು ವರ್ಷದ ಮೊದಲ ದಿನ, ಹೊಸವರ್ಷಾಚರಣೆ ಹಿನ್ನೆಲೆ ಮೈಸೂರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿದ್ದು, ಭಾರೀ ಜನಜಂಗುಳಿ ಉಂಟಾಗಿದೆ.

ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಸಾವಿರಾರು ಮಂದಿ ಭಕ್ತರ ಆಗಮಿಸಿದ್ದು, ಶಕ್ತಿ ದೇವತೆಯ ದರ್ಶನ ಪಡೆಯಲು ಭಕ್ತ ಸಾಗರ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬಂದಿತು. ಹೊಸ ವರ್ಷದಂದು ನೂಕು‌ ನುಗ್ಗಲಿ‌ನ ನಡುವೆ ತಾಯಿ  ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರು ಮುಗಿಬಿದ್ದರು.

ಭಕ್ತಸಾಗರವೇ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ ಹಿನ್ನೆಲೆ, ಚಾಮುಂಡಿ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಹಲವೆಡೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅತಿಯಾದ ವಾಹನಗಳ ದಟ್ಟಣೆಯಿಂದಾಗಿ ಮಹಿಳೆಯರು, ಮಕ್ಕಳು, ವೃದ್ದರ ಪರದಾಟ ನಡೆಸಿದ್ದು, ವಾಹನಗಳ ದಟ್ಟಣೆ ಸರಿಪಡಿಸಲು ಸಂಚಾರಿ ಪೊಲೀಸರು ಹರಸಾಹಸ ಪಟ್ಟರು.

Key words: new year- devotees – Chamundi hill- full -traffic jam.

Font Awesome Icons

Leave a Reply

Your email address will not be published. Required fields are marked *