ಚುನಾವಣಾ ಬಾಂಡ್‌ ನಿಂದ ಮೋದಿ ಮುಖವಾಡ ಕಳಚಿ ಬಿದ್ದಿದೆ: ಸಚಿವ ಎಂ.ಬಿ ಪಾಟೀಲ್ – Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

kannada t-shirts

ಬೆಂಗಳೂರು,ಮಾರ್ಚ್,18,2024(www.justkannada.in):  ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿಬಿದ್ದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರಹಾರ ಮಾಡಿದರು.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಮೋದಿಯವರು “ನಾನೂ ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ” ಎಂದು ಹೇಳಿಕೊಳ್ಳುತ್ತಾ ಹುಸಿ ವರ್ಚಸ್ಸು ಸೃಷ್ಟಿಸಿಕೊಂಡಿದ್ದರು. ಆ ಹುಸಿ ವರ್ಚಸ್ಸಿಗೆ ಈಗ ಸರಿಯಾದ ಹೊಡೆತ ಬಿದ್ದಿದೆ ಎಂದು ಟೀಕಿಸಿದರು.

ಹೆಚ್ಚಿನ ಸಂದರ್ಭಗಳಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಳಿಗೆ ಒಳಗಾದ ನಂತರ ಅಥವಾ ಗುತ್ತಿಗೆಗಳನ್ನು ಪಡೆದ ನಂತರ ಬಿಜೆಪಿ ಹೆಸರಲ್ಲಿ ಚುನಾವಣಾ ಬಾಂಡ್ ತೆಗೆದುಕೊಂಡಿರುವುದು ಬಹಿರಂಗಗೊಂಡಿದೆ. ಇದರಿಂದಾಗಿ, ಭ್ರಷ್ಟಾಚಾರ, ನೈತಿಕತೆಯ ಬಗ್ಗೆ ಪ್ರಸ್ತಾಪಿಸುತ್ತಿದ್ದ ಮೋದಿ ಅವರ ನಿಜವಾದ ಬಣ್ಣ ಏನು ಎಂಬುದು ಗೊತ್ತಾಗಿದೆ ಎಂದು ವಿವರಿಸಿದರು.

ಚುನಾವಣಾ ಬಾಂಡ್ ರೂಪದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಒಂದಷ್ಟು ಹಣ ಬಂದಿದೆ. ಆದರೆ, ಅದು ಸಹಜವಾಗಿ ಬಂದಿರುವಂತದ್ದು. ಅದು ಯಾವುದೇ ಇಡಿ, ಸಿಬಿಐ ಇನ್ನಿತರ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆ ಹಾಕಿ ವಸೂಲಿ ಮಾಡಿರುವಂತದ್ದಲ್ಲ ಎಂದು ಎಂಬಿ ಪಾಟೀಲ್ ಸಮರ್ಥಿಸಿಕೊಂಡರು.

ಚುನಾವಣಾ ಬಾಂಡ್ ವಿಷಯ ಇಷ್ಟಕ್ಕೇ ನಿಲ್ಲುವುದಿಲ್ಲ. ಇದರ ಆಳ ಬಹಳ ಇದೆ. ಇದು ಇನ್ನೂ ಮುಂದುವರಿಯಲಿದೆ. ಚುನಾವಣಾ ಬಾಂಡ್ ಗೆ  ಸಂಬಂಧಿಸಿದಂತೆ ಎಲ್ಲಾ ಪಕ್ಷಗಳನ್ನೂ ತನಿಖೆಗೆ ಒಳಪಡಿಸಲಿ ಎಂದು ಅವರು ಒತ್ತಿ ಹೇಳಿದರು.

ಚುನಾವಣಾ ಬಾಂಡ್ ವ್ಯವಸ್ಥೆಯಿಂದ ಮತದಾನ ಪ್ರಕ್ರಿಯೆಯಲ್ಲಿ  ಪಾರದರ್ಶಕತೆ ತರಲು ಸಾಧ್ಯ ಎಂದು ಭಾವಿಸಲಾಗಿತ್ತು. ಆದರೆ, ಇದರ ದುರುಪಯೋಗವೇ ಜಾಸ್ತಿಯಾಗಿದೆ ಎಂದೂ ಅವರು ಹೇಳಿದರು.

ಮನಮೋಹನ್ ಸಿಂಗ್ ಅವರಿಗೆ ಅಭಿವೃದ್ಧಿಯ ಬಗ್ಗೆ ಹಾಗೂ ಜನರ ಕಷ್ಟನಷ್ಟಗಳ ಬಗ್ಗೆ ನಿಜವಾದ ಕಾಳಜಿ ಇತ್ತು. ಪ್ರವಾಹ, ಬರ ಸೇರಿದಂತೆ ಯಾವುದೇ ನೈಸರ್ಗಿಕ ವಿಪತ್ತು ಉಂಟಾದಾಗ ಕರ್ನಾಟಕ ಸೇರಿದಂತೆ ದೇಶದ ಯಾವುದೇ ಸ್ಥಳಕ್ಕೆ ಖುದ್ದು ಭೇಟಿ ನೀಡುತ್ತಿದ್ದರು. ಆದರೆ, ಮೋದಿ ಅವರಿಗೆ ಇಂತಹ ನಿಜವಾದ ಕಾಳಜಿ ಇಲ್ಲ. ಹೀಗಾಗಿಯೇ, ರಾಜ್ಯದಲ್ಲಿ ಬರ ಇದ್ದಾಗ ಅವರು ಈ ಕಡೆ ಸುಳಿಯಲಿಲ್ಲ. ಈಗ, ಚುನಾವಣೆ ಎಂದ ತಕ್ಷಣ ಎರಡು ಸಲ ಇಲ್ಲಿಗೆ ಭೇಟಿಕೊಟ್ಟಿದ್ದಾರೆ ಎಂದು ಎಂಬಿ ಪಾಟೀಲ್ ಕಿಡಿಕಾರಿದರು.

Key words: PM-Modi – election bond- Minister- MB Patil

website developers in mysore

Font Awesome Icons

Leave a Reply

Your email address will not be published. Required fields are marked *