ಚುರುಕುಗೊಂಡ ಮಹಾನಗರದಲ್ಲಿ ತಪಾಸಣೆ ಕಾರ್ಯ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ತಪಾಸಣೆ ಕಾರ್ಯ ಚುರುಕುಗೊಂಡಿದೆ.

ಮಧ್ಯರಾತ್ರಿ ವಾಹನ ಚೆಕ್ ಮಾಡಿದ ಪಾಲಿಕೆಯ ಆಯುಕ್ತರು, ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮೀಷನರೇಟ್ ನ ಸಹಭಾಗಿತ್ವದಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ಪಾಲಿಕೆಯ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ವಾಹನಗಳ ಪರಿಶೀಲನೆ ನಡೆಸಿ, ಪೊಲೀಸರೊಂದಿಗೆ ಮಧ್ಯರಾತ್ರಿ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆಗೆ ಮುಂದಾಗಿದ್ದಾರೆ.

ನಗರದಲ್ಲಿ ನಾಲ್ಕು ದಿಕ್ಕಿನಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದು, ಸ್ವತಃ ವಾಹನಗಳ ಪರಿಶೀಲನೆ ನಡೆಸಿದ ಆಯುಕ್ತರು, ಮಧ್ಯರಾತ್ರಿ ಚೆಕ್ ಪೋಸ್ಟ್ ಗೆ ತೆರಳಿ ವಾಹನಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೆಲ ಚೆಕ್ ಪೋಸ್ಟ್ ಗಳಲ್ಲಿ ಸೌಲಭ್ಯಗಳನ್ನು ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

Font Awesome Icons

Leave a Reply

Your email address will not be published. Required fields are marked *