ಜನ್ಮದಿನದ ಸಂಭ್ರಮದಲ್ಲಿ ಮಿಸ್ ವರ್ಲ್ಡ್ ಐಶ್ವರ್ಯಾ ರೈ

ಮುಂಬೈ: ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಇಂದು (ನ.1) ಜನ್ಮದಿನದ ಸಂಭ್ರಮ. ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಶುಭಾಶಯ ಬರುತ್ತಿದೆ. ವಯಸ್ಸು ಐವತ್ತಾದರೂ ಅವರು ಗ್ಲಾಮರ್​ನ ಕಾಪಾಡಿಕೊಂಡು ಬಂದಿದ್ದಾರೆ. ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಅವರು ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ.

ಐಶ್ವರ್ಯ ರೈ  ಇವರು 1973ರ ನವೆಂಬರ್ 1ರಂದು ಕರ್ನಾಟಕದ ಮಂಗಳೂರಿನಲ್ಲಿ ಜನಿಸಿದರು. ಮುಂಬೈ ನಗರದಲ್ಲಿ ಡಿ ಜಿ ರೂಪಾರೆಲ್ ಕಾಲೇಜ್ ಮತ್ತು ಆರ್ಯ ವಿದ್ಯಾ ಕಾಲೇಜಿನಲ್ಲಿ ಓದಿದ ಐಶ್ವರ್ಯಾ ಒಂಬತ್ತನೆಯ ತರಗತಿಯಲ್ಲಿ ಇದ್ದಾಗಲೆ ಕ್ಯಾಮೆಲಿನ್ ಸಂಸ್ಥೆಗೆ ಮಾಡೆಲ್ ಆಗಿ ಕೆಲಸ ಮಾಡಿದ್ದರು. ನಂತರ ಅನೇಕ ಜಾಹೀರಾತುಗಳಲ್ಲಿ ನಟಿಸಿದ ಐಶ್ವರ್ಯಾ ವಿಶ್ವಸುಂದರಿ ಸ್ಪರ್ಧೆಯನ್ನು ಗೆದ್ದರು.

ಐಶ್ವರ್ಯಾ ರೈ ಮಾಡೆಲ್ ಆಗಿದ್ದರು. 1994ರಲ್ಲಿ ಐಶ್ವರ್ಯಾ ‘ಮಿಸ್ ವರ್ಲ್ಡ್​ 1994’ ಆದರು. ಇದಾದ ಬಳಿಕ ಅವರಿಗೆ ಚಿತ್ರರಂಗದಿಂದ ಸಾಕಷ್ಟು ಆಫರ್ ಬಂತು. ಆದರೆ, ಸಿನಿಮಾ ಒಪ್ಪಿಕೊಳ್ಳುವಲ್ಲಿ ಅವರು ಅವಸರ ತೋರಲಿಲ್ಲ. 1997ರಲ್ಲಿ ಅವರ ನಟನೆಯ ಮೊದಲ ಸಿನಿಮಾ ‘ಇರುವರ್’ ರಿಲೀಸ್ ಆಯಿತು.  ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಮಣಿರತ್ನಂ ಅವರು. ಆ ಬಳಿಕ ಅವರು ಹಿಂದಿರುಗಿ ನೋಡಲೇ ಇಲ್ಲ.  ನಂತರ ಐಶ್ವರ್ಯಾ ರೈ ಅವರು ಹಿಂದಿ ಸಿನಿಮಾ ರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆದರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದರು. 97ರಿಂದ ಇಲ್ಲಿಯವರೆಗೆ ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ.

ಐಶ್ವರ್ಯಾ ರೈ ಅವರು ರಿಯಲ್ ಎಸ್ಟೇಟ್ ಮೇಲೆ ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಅವರು ಸದ್ಯ ಜಲ್ಸಾದಲ್ಲಿ ಪತಿ ಅಭಿಷೇಕ್, ಮಗಳು ಆರಾಧ್ಯಾ ಜೊತೆ ವಾಸಿಸುತ್ತಿದ್ದಾರೆ. ಈ ಮನೆ ಅಮಿತಾಭ್ ಹೆಸರಲ್ಲಿ ಇದೆ. ಈ ಬಂಗಲೆಯ ಬೆಲೆ 112 ಕೋಟಿ ರೂಪಾಯಿ ಎನ್ನಲಾಗಿದೆ.

Font Awesome Icons

Leave a Reply

Your email address will not be published. Required fields are marked *