ಮುಂಬೈ: ಶಾರುಖ್ ಖಾನ್ ಅಭಿನಯದ ‘ಜವಾನ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ ಆರ್ಭಟಿಸುತ್ತಿದೆ. ಚಿತ್ರ ಬಿಡುಗಡೆಯಾಗಿ 9 ದಿನ ಕಳೆದರೂ ಕೂಡ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ.
ಎರಡನೇ ವೀಕೆಂಡ್ನಲ್ಲಿ ಇನ್ನೂ ಹೆಚ್ಚಿನ ಕಲೆಕ್ಷನ್ ಆಗುವ ನಿರೀಕ್ಷೆ ಇದೆ. ಅಲ್ಲದೇ, ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಜನರು ಈ ಸಿನಿಮಾವನ್ನು ಮುಗಿಬಿದ್ದು ನೋಡುವ ಸಾಧ್ಯತೆ ಇದೆ. ಭಾರತದ ಬಾಕ್ಸ್ ಆಫೀಸ್ನಲ್ಲಿ ‘ಜವಾನ್’ ಸಿನಿಮಾದ ಕಲೆಕ್ಷನ್ 410 ಕೋಟಿ ರೂಪಾಯಿ ಆಗಿದೆ. ವಿಶ್ವಾದ್ಯಂತ ಈ ಚಿತ್ರ 700 ಕೋಟಿ ರೂಪಾಯಿ ದಾಟಿದೆ.
ಶಾರುಖ್ ಖಾನ್ಗೆ ಜೋಡಿಯಾಗಿ ನಯನತಾರಾ ನಟಿಸಿದ್ದಾರೆ. ಅಲ್ಲದೇ ದೀಪಿಕಾ ಪಡುಕೋಣೆ, ಪ್ರಿಯಾಮಣಿ, ವಿಜಯ್ ಸೇತುಪತಿ, ಸುನೀಲ್ ಗ್ರೋವರ್ ಮುಂತಾದ ಪ್ರತಿಭಾವಂತ ಕಲಾವಿದರು ಕೂಡ ಇದರಲ್ಲಿ ನಟಿಸಿದ್ದಾರೆ.