ಟೆನಿಸ್ ತಾರೆ ಸಾನಿಯಾ ಮಿರ್ಜಾಗೆ ವಿಚ್ಛೇದನ ನೀಡಿ 2ನೇ ಮದುವೆಯಾದ ಶೋಯೆಬ್ ಮಲಿಕ್

ದೆಹಲಿ: ಪಾಕಿಸ್ತಾನದ ಸ್ಟಾರ್ ಕ್ರಿಕೆಟರ್ ಶೋಯೆಬ್ ಮಲಿಕ್ ಭಾರತದ ಮಾಜಿ ಟೆನಿಸ್ ತಾರೆ ಸಾನಿಯಾ ಮಿರ್ಜಾಗೆ ಕೈಕೊಟ್ಟಿದ್ದಾರೆ. ಶೋಯೆಬ್ ಮಲಿಕ್ ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶೋಯೆಬ್ ಜನಪ್ರಿಯ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದು, ಶನಿವಾರ ಬೆಳಿಗ್ಗೆ ಅವರು ತಮ್ಮ ಮದುವೆಯ ಫೋಟೋವನ್ನು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ 2010ರಲ್ಲಿ ಹೈದರಾಬಾದ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ 2018ರಲ್ಲಿ ಇಜಾನ್ ಎಂಬ ಗಂಡು ಮಗು ಜನಿಸಿದೆ.

ಶೋಯೆಬ್ ಈ ಹಿಂದೆ ಭಾರತದ ಟೆನಿಸ್ ಸೆನ್ಸೇಷನ್ ಸಾನಿಯಾ ಮಿರ್ಜಾ ಅವರನ್ನು ಮದುವೆಯಾಗಿದ್ದರು. ಆದರೆ , ಕಳೆದ ಕೆಲವು ಸಮಯದಿಂದ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಹರಿದಾಡಿತ್ತು.

ಎರಡು ದಿನಗಳ ಹಿಂದೆಯಷ್ಟೇ ಸಾನಿಯಾ ಮಿರ್ಜಾ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ, ”ವಿಚ್ಛೇದನ ತುಂಬಾ ಕಷ್ಟ, ಮದುವೆ ಕೂಡ ತುಂಬಾ ಕಷ್ಟ,” ಎಂದು ಬರೆದುಕೊಂಡಿದ್ದರು.

Font Awesome Icons

Leave a Reply

Your email address will not be published. Required fields are marked *