ನಟ ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಈ ಸಿನಿಮಾದಲ್ಲಿ ಅವರ ಜೊತೆ ಕತ್ರಿನಾ ಕೈಫ್, ಇಮ್ರಾನ್ ಹಷ್ಮಿ ಮುಂತಾದವರು ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಗಮನ ಸೆಳೆದಿದೆ. ನವೆಂಬರ್ 12ರಂದು ‘ಟೈಗರ್ 3’ ರಿಲೀಸ್ ಆಗಲಿದೆ. ಸೆನ್ಸಾರ್ ಮಂಡಳಿಯಿಂದ ಈ ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ.
ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿರುವ ಈ ಸಿನಿಮಾದ ಅವಧಿ 2 ಗಂಟೆ 33 ನಿಮಿಷ ಇದೆ ಎಂಬ ಮಾಹಿತಿ ಕೂಡ ಈಗ ಸಿಕ್ಕಿದೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಸ್ಥಾನ ಪಡೆದುಕೊಂಡಿದೆ. ಇನ್ನು ‘ಟೈಗರ್ 3’ ಚಿತ್ರಕ್ಕೆ ಯಶ್ ರಾಜ್ ಫಿಲ್ಮ್ಸ್ ಸಂಸ್ಥೆ ಬಂಡವಾಳ ಹೂಡಿದೆ. ಮನೀಶ್ ಶರ್ಮಾ ಅವರು ನಿರ್ದೇಶನ ಮಾಡಿದ್ದಾರೆ. ಯು/ಎ ಪ್ರಮಾಣ ಪತ್ರ ಸಿಕ್ಕಿರುವುದರಿಂದ ಫ್ಯಾಮಿಲಿ ಪ್ರೇಕ್ಷಕರು ತಮ್ಮ ಮಕ್ಕಳ ಜೊತೆ ಬಂದು ಸಿನಿಮಾ ನೋಡಬಹುದು. ಇದರಿಂದ ಚಿತ್ರಕ್ಕೆ ಅನುಕೂಲ ಆಗಲಿದೆ.