ಟ್ರಕ್‌ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಸಾವು, ಓರ್ವ ಗಂಭೀರ

ಚಂಡಿಗಢ: ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಈ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಈ ಘಟನೆ ಹೋಶಿಯಾರ್‌ಪುರದ ಮುಕೇರಿಯನ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಾಯದಿಂದ ಕಾರಿನಲ್ಲಿ ಸಿಲುಕಿದ್ದ ಜನರನ್ನು ಹೊರತೆಗೆದು ಅವರನ್ನು ಮುಕೇರಿಯನ್ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ಲಭಿಸಿದೆ.

ಈ ಅಪಘಾತದ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *