ಟ್ರ್ಯಾಕ್ಟರ್ ಶಾಲಾ ಬಸ್ ನಡುವೆ ಡಿಕ್ಕಿ : 4 ವಿದ್ಯಾರ್ಥಿಗಳು ಮೃತ್ಯು

ಬಾಗಲಕೋಟೆ : ಟ್ಯಾಕ್ಟರ್ ಹಾಗೂ ಶಾಲಾ ಬಸ್ ನಡುವೆ ಡಿಕ್ಕಿಯಾಗಿದ್ದು, ಶಾಲಾ ಬಸ್ಸಿನಲ್ಲಿದ ನಾಲ್ವರ ಮಕ್ಕಳು ಮೃತಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಹಲಗೂರು ಗ್ರಾಮದಲ್ಲಿ ನಡೆದಿದೆ.

ಸಾಗರ ಕಡಕೋಳ, ಶ್ವೇತಾ, ಗೋವಿಂದ, ಬಸವರಾಜ್ ಎನ್ನುವ ಮಕ್ಕಳು ಮೃತಪಟ್ಟಿದ್ದು, ಇಬ್ಬರು ಪಿಯುಸಿ, ಇಬ್ಬರು 9ನೇ ಕ್ಲಾಸ್ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ.ತಡರಾತ್ರಿ 12 ಗಂಟೆ ವೇಳೆ ಈ ಅಪಘಾತ ಸಂಭವಿಸಿದೆ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಶಾಲೆಯ ಒಂದು ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿ ಗ್ರಾಮದವರು ಎಂದು ಪ್ರಾಥಮಿಕ ತನಿಖೆ ತಿಳಿದು ಬಂದಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *