ಡೇಟಿಂಗ್​​ ಮೀಟಿಂಗ್​ ನಡುವೆ ರಶ್ಮಿಕಾ-ದೇವರಕೊಂಡ ನಿಶ್ಚಿತಾರ್ಥಕ್ಕೆ ಮುಹೂರ್ತ

ಮುಂಬೈ: ನ್ಯಾಷನಲ್​ ಕ್ರಶ್ ನಟಿ​​ ರಶ್ಮಿಕಾ ಮಂದಣ್ಣ ಒಂದಲ್ಲಾ ಒಂದು ವಿಷಯಕ್ಕೆ ಸಾಮಾಜಿಕ ಜಾಲತಾಣಲ್ಲಿ ಆಗಾಗ ಸುದ್ದಿಯಲ್ಲಿರುತ್ತಾರೆ. ಇನ್ನು ಕಳೆದ ಕೆಲವು ವರ್ಷಗಳಿಂದ ನಟ ವಿಜಯ ದೇವರಕೊಂಡ ಹಾಗೂ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಬಹಳ ಆತ್ಮೀಯರಾಗಿ ಕಾಣಿಸಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

ಈ ಇಬ್ಬರು ಡೇಟಿಂಗ್​​ ಮಾಡುತ್ತಿದ್ದಾರೆ. ಇವರು ಜೊತೆಯಾಗಿ ವಿದೇಶದಲ್ಲಿ ತಿರುಗಾಡಿದ್ದಾರೆ ಎಂಬ ವಿಚಾರ ಸೋಷಿಯಲ್​ ಮಿಡಿಯಾದಲ್ಲಿ ಹರಿದಾಡುತ್ತಿರುವುದು ಹೊಸತೇನಲ್ಲ. ದೀಪಾವಳಿ ಹಬ್ಬವನ್ನು ರಶ್ಮಿಕಾ ದೇವರಕೊಂಡ ಜೊತೆ ಆಚರಿಸಿಕೊಂಡಿದ್ದರು.

ಆದರೆ ಇದೀಗ ಡೇಟಿಂಗ್​​ ಮೀಟಿಂಗ್​ ನಡುವೆ ಇನ್ನೊಂದು ವಿಚಾರ ಸಖತ್​ ವೈರಲ್​ ಆಗುತ್ತಿದೆ. ಅದುವೆ ನಟ ವಿಜಯ ದೇವರಕೊಂಡ ಹಾಗೂ ನಟಿ ರಶ್ಮಿಕಾ ಅವರ ನಿಶ್ಚಿತಾರ್ಥ. ಮುಂದಿನ ತಿಂಗಳು ಅಂದರೆ ಫೆಬ್ರವರಿ 2ನೇ ವಾರದಲ್ಲಿ ಎಂಗೇಜ್ಮೆಂಟ್ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ರಶ್ಮಿಕಾ ಮಂದಣ್ಣ ಅಥವಾ ವಿಜಯ ದೇವರಕೊಂಡ ಕಡೆಯಿಂದ ಅಧಿಕೃತವಾಗಿ ಯಾವ ಮಾಹಿತಿಯೂ ಹೊರಬಿದ್ದಿಲ್ಲ.

Font Awesome Icons

Leave a Reply

Your email address will not be published. Required fields are marked *