ಡೇ ಕೇರ್ ಸೆಂಟರ್​ನ ಮಹಡಿಯಿಂದ ಬಿದ್ದಿದ್ದ ಮಗು ಚಿಕಿತ್ಸೆ ಫಲಿಸದೆ ಸಾವು

ಬೆಂಗಳೂರು: ಡೇ ಕೇರ್ ಸೆಂಟರ್ ​ನ 3ನೇ ಮಹಡಿಯಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದೆ.

ಕೇರಳ ಮೂಲದ ಟೆಕ್ಕಿ ದಂಪತಿ ಜಿಟೋ ಟಾಮಿ ಜೋಸೆಫ್, ಬಿನಿಟೋ ಥಾಮಸ್ ಪುತ್ರಿ ಜಿನಾ ಮೃತ ಮಗು.

ಜನವರಿ 22 ರ ಮಧ್ಯಾಹ್ನ ಖಾಸಗಿ ಫ್ರೀ ಸ್ಕೂಲ್ (ನರ್ಸರಿ) ಮೂರನೇ ಮಹಡಿಯಿಂದ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ಹಾಗಾಗಿ ಹೆಬ್ಬಾಳ ಸಮೀಪದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮಗುವಿನ ತಂದೆ ಜಿಯೋ ಟಾಮಿ ಜೋಸೆಫ್​ ಅವರು ‘ವಾಸ್ತವಾಂಶ ಮರೆಮಾಡಿ, ಸರಿಯಾದ ಮಾಹಿತಿ ನೀಡದೆ, ನಿರ್ಲಕ್ಷ್ಯ ವಹಿಸಿರುವ ಫ್ರೀ ಸ್ಕೂಲ್ ವಿರುದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

 

 

Font Awesome Icons

Leave a Reply

Your email address will not be published. Required fields are marked *