ಚೆನ್ನೈ: ಪ್ರಮುಖ ಬೆಳವಣಿಗೆಯೊಂದರಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಸಚಿವ ಕೆ ಪೊನ್ಮುಡಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ.
1.75 ಕೋಟಿ ರೂ. ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ಅವರ ಪತ್ನಿಯನ್ನು ದೋಷಿಗಳು ಎಂದು ಮದ್ರಾಸ್ ಹೈಕೋರ್ಟ್ ಎರಡು ದಿನಗಳ ಹಿಂದೆ ತೀರ್ಪು ನೀಡಿ ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದೆ. ಈ ಆದೇಶದಿಂದ ತಮಿಳುನಾಡು ಸಿಎಂ ಸ್ಟಾಲಿನ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ಶಿಕ್ಷೆಯ ಜೊತೆಗೆ ದಂಪತಿಗೆ ತಲಾ 50 ಲಕ್ಷ ದಂಡವನ್ನೂ ವಿಧಿಸಲಾಗಿದೆ. ಸದ್ಯ ಪೊನ್ಮುಡಿಯ ಉನ್ನತ ಶಿಕ್ಷಣ ಖಾತೆಯನ್ನು ಅವರ ಸಹೋದ್ಯೋಗಿಗಳಿಗೆ ಹಸ್ತಾಂತರಿಸುವ ಸಾಧ್ಯತೆಗಳಿವೆ. ಕಾನೂನಿನಡಿಯಲ್ಲಿ, ಶಾಸಕಾಂಗ ವ್ಯವಸ್ಥೆಯ ಸದಸ್ಯರು ತಪ್ಪಿತಸ್ಥರಾದರೆ ಸಂಸತ್ತು ಅಥವಾ ವಿಧಾನಸಭೆಯಿಂದ ಅವರು ಅನರ್ಹರಾಗುತ್ತಾರೆ.