ತಮಿಳು ನಟ ಸಿದ್ದಾರ್ಥ್ ಬಳಿ “ಕನ್ನಡಿಗರ ಪರವಾಗಿ ಕ್ಷಮಿಸಿ” ಎಂದ ಪ್ರಕಾಶ್ ರಾಜ್

ಬಹುಭಾಷಾ ನಟ ಪ್ರಕಾಶ್ ರಾಜ್ ಒಂದಲ್ಲಾ ಒಂದು ರೀತಿಯಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಇನ್ನು ತಮಿಳು ನಟ ಸಿದ್ದಾರ್ಥ್ ಅವರ ನಟನೆಯ “ಚಿಕ್ಕು” ಸಿನಿಮಾ ಸೆಪ್ಟೆಂಬರ್ 28ರಂದು ರಿಲೀಸ್ ಆಗಿದೆ. ಈ ಸಿನಿಮಾದ ಸುದ್ದಿಗೋಷ್ಠಿ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆ ಸಂಘಟನೆ ಸದಸ್ಯರು ಆಗಮಿಸಿ, ತಡೆದಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಹಲವರು ಕರವೇ ಸಂಘಟನೆಯ ಕ್ರಮವನ್ನು ಬೆಂಬಲಿಸಿದ್ದಾರೆ. ಇನ್ನೂ ಕೆಲವರು ಇದು ತಪ್ಪು ಎಂದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕಾಶ್ ರಾಜ್ ಟ್ವೀಟ್ ಒಂದನ್ನು ಮಾಡಿದ್ದಾರೆ. ಅವರು ನಟ ಸಿದ್ದಾರ್ಥ್ ಬಳಿ ಕ್ಷಮೆ ಕೇಳಿದ್ದಾರೆ.

ಕಳೆದ ದಿನ ಬೆಂಗಳೂರಿನ ಮಲ್ಲೇಶ್ವರಂನ ಹೋಟೆಲ್‌ನಲ್ಲಿ ಸಿದ್ಧಾರ್ಥ್ ತಮ್ಮ ಚಿತ್ರದ ಬಗ್ಗೆ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಸುದ್ದಿಗೋಷ್ಠಿ ನಡುವೆ ಸಭಾಂಗಣಕ್ಕೆ ಪ್ರವೇಶಿಸಿದ ಕಾರ್ಯಕರ್ತರು, ರಾಜ್ಯದಲ್ಲಿ ಕಾವೇರಿ ಬಿಕ್ಕಟ್ಟು ತಾರಕಕ್ಕೇರಿದೆ. ಈ ವೇಳೆ ಬೆಂಗಳೂರಿನಲ್ಲಿ ತಮಿಳು ಚಿತ್ರದ ಪ್ರಚಾರ ಕಾರ್ಯಕ್ರಮ ನಡೆಸುವುದಕ್ಕೆ ನಮ್ಮ ಆಕ್ಷೇಪವಿದೆ ಎಂದರು.

ಈ ವಿಚಾರ ಸಲುವಾಗಿ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ. ‘ಕಾವೇರಿ ನಮ್ಮದು. ಹೌದು, ನಮ್ಮದೇ.. ಆದರೆ, ದಶಕಗಳ ಈ ಸಮಸ್ಯೆಯನ್ನು ಪರಿಹರಿಸಲಾರದ ಎಲ್ಲಾ ಅಸಮರ್ಥ ರಾಜಕೀಯ ಪಕ್ಷಗಳನ್ನು, ನಾಯಕರನ್ನು ಪ್ರಶ್ನಿಸದೇ, ಕೇಂದ್ರ ಸರ್ಕಾರಕ್ಕೆ ಒತ್ತಡ ತರದ ನಾಲಾಯಕ್ ಸಂಸದರನ್ನು ತರಾಟೆಗೆ ತೆಗೆದುಕೊಳ್ಳದೆ, ಹೀಗೆ ಅಸಹಾಯಕ ಜನಸಾಮಾನ್ಯರನ್ನು, ಕಲಾವಿದರನ್ನು ಹಿಂಸಿಸುವುದು ತಪ್ಪು. ಒಬ್ಬ ಕನ್ನಡಿಗನಾಗಿ ಸಹ್ರುದಯ ಕನ್ನಡಿಗರ ಪರವಾಗಿ ಕ್ಷಮಿಸಿ’ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *