ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಕಿಚ್ಚ ಸುದೀಪ್

ವಿಕ್ರಾಂತ್ ರೋಣ ಸಿನಿಮಾದ ಬಳಿಕ ನಟ ಕಿಚ್ಚ ಸುದೀಪ್ ಹೊಸ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯದಲ್ಲೇ ಸುದೀಪ್ ನಟನೆಯ ಮುಂದಿನ ಸಿನಿಮಾದ ಶೂಟಿಂಗ್ ಆರಂಭವಾಗಲಿದ್ದು ಅದಕ್ಕೂ ಮುನ್ನ ಸುದೀಪ್ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಗಾಂಧಿನಗರದಲ್ಲಿ ಶುರುವಾಗಿರುವ ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ಸಮಸ್ಯೆಯಿಂದ ಕಿರಿ ಕಿರಿ ಅನುಭವಿಸಿರುವ ಸುದೀಪ್ ಇದೀಗ ದೇವರ ದರ್ಶನ ಪಡೆದು ಕೊಂಚ ನಿರಾಳರಾಗಿದ್ದಾರೆ. ಸುದೀಪ್ ನಟನೆಯ 46 ಸಿನಿಮಾಗೆ ಸಿದ್ಧತೆ ನಡೆಯುತ್ತಿದೆ. ಕುಮಾರ್ ಜೊತೆಗಿನ ಸಂಧಾನದ ಮಾತುಕತೆ ನಡೆಯುತ್ತಿದೆ. ವಿವಾದ ಬದಿಗಿಟ್ಟು ಸುದೀಪ್ ಹೊಸ ಸಿನಿಮಾದ ಶೂಟಿಂಗ್‌ನತ್ತ ಮುಖ ಮಾಡಿದ್ದಾರೆ.‌

‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ತಮಿಳು ನಿರ್ದೇಶಕ ವಿಜಯ್ ಕಾರ್ತಿಕೇಯನ್ ಈ ‘ಕಿಚ್ಚ46’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ತಮಿಳಿನ ಕಲೈಪುಲಿ ಎಸ್. ತನು ಜೊತೆ ಸೇರಿ ಸುದೀಪ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಮಹಾಬಲಿಪುರಂನಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧತೆ ನಡೀತಿದೆಯಂತೆ. ಶೀಘ್ರದಲ್ಲೇ ಸುದೀಪ್ ಚಿತ್ರೀಕರಣದ ಅಖಾಡಕ್ಕೆ ಇಳಿಯಲಿದ್ದಾರೆ.

Font Awesome Icons

Leave a Reply

Your email address will not be published. Required fields are marked *