ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದರೆ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಬಳಿಕ ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆಯ ಹಿನ್ನಲೆಯಲ್ಲಿ ತೀರ್ಪನ್ನು ಕಾಯ್ದಿರಿಸಿದೆ.
ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ ಏಕ ಸದಸ್ಯ ನ್ಯಾಯಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿತ್ತು.
ಆದರೆ ಹೈಕೋರ್ಟ್ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘದಿಂದ ಸುಪ್ರೀಂ ಮೊರೆ ಹೋಗಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠವು ಬಾಕಿ ಇರುವಂತಹ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಬೋರ್ಡ್ ಪರೀಕ್ಷೆಯನ್ನು ಮುಂದೂಡಿ ಆದೇಶ ಕೂಡ ಮಾಡಲಾಗಿತ್ತು.
ಈ ಬೆನ್ನಲ್ಲೇ ಇಂದು ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿದ ಸೂಚನೆಯಂತೆ ವಿಚಾರಣೆಯನ್ನು ಪೂರ್ಣಗೊಳಿಸಿತ್ತು. ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆ ಬಾಕಿಯಿರುವ ಕಾರಣ, ತನ್ನ ತೀರ್ಪನ್ನು ಇಂದು ಕಾಯ್ದಿರಿಸಿದೆ.