ತೆಲುಗಿನ ಖ್ಯಾತ ನಟ ರಾಮ್ ಚರಣ್ ಗೆ ಗೌರವ ಡಾಕ್ಟರೇಟ್

ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರಿಗೆ ಚೆನ್ನೈನ ವೇಲ್ಸ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.

ಸಿನಿಮಾ ರಂಗದಲ್ಲಿ ಸಲ್ಲಿಸಿದ ಸೇವೆಗಾಗಿ ಈ ಗೌರವನ್ನು ವಿಶ್ವವಿದ್ಯಾಲಯ ನೀಡುತ್ತಿದ್ದಾರೆ. ಅವರು ಹೊಸ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದು, ಆ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ನಾಯಕಿ ಜಾನ್ವಿ ಕಪೂರ್ ಜೊತೆಗಿನ ಚಿತ್ರೀಕರಣದ ಫೋಟೋಗಳನ್ನು ರಾಮ್ ಚರಣ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ರಾಮ್ ಚರಣ್- ಜಾನ್ವಿ ಕಪೂರ್ ನಟನೆಯ ಹೊಸ ಚಿತ್ರಕ್ಕೆ ಅದ್ಧೂರಿಯಾಗಿ ಮುಹೂರ್ತ ಕಾರ್ಯಕ್ರಮ ಹೈದರಾಬಾದ್‌ನಲ್ಲಿ ನೆರವೇರಿದೆ. ಈ ಇವೆಂಟ್‌ಗೆ ಮೆಗಾಸ್ಟಾರ್ ಚಿರಂಜೀವಿ, ಬೋನಿ ಕಪೂರ್, ಸುಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

 

Font Awesome Icons

Leave a Reply

Your email address will not be published. Required fields are marked *