ನವರಸ ನಾಯಕ ಜಗ್ಗೇಶ್ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ನ ‘ತೋತಾಪುರಿ 2’ ಸಿನಿಮಾದ ಟ್ರೈಲರ್ ಅನ್ನು ಇಂದು ನಟ ಶಿವರಾಜ್ ಕುಮಾರ್ ಬಿಡುಗಡೆ ಮಾಡಿದರು. ಜೊತೆಗೆ ಅಭಿಮಾನಿಗಳಿಗೆ ಗಣೇಶ್ ಹಬ್ಬ ಶುಭಾಶಯಗಳನ್ನು ತಿಳಿಸಿದರು.
ರಿಲೀಸ್ ಆಗಿರುವ ಟ್ರೈಲರ್ ನಲ್ಲಿ ಧನಂಜಯ್, ಜಗ್ಗೇಶ್, ಅದಿತಿ ಪ್ರಭುದೇವ್, ಸುಮನ್ ರಂಗನಾಥ್ ಅವರ ಪಾತ್ರಗಳನ್ನು ಇಟ್ಟುಕೊಂಡು ಸಿನಿಮಾದ ಝಲಕ್ ತೋರಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕ. ಹಾಸ್ಯ, ಎಮೋಷನ್ ಜೊತೆಗೊಂದು ಅದ್ಭುತ ಸಂದೇಶವನ್ನು ಈ ಸಿನಿಮಾ ನೀಡಲಿದೆ ಎನ್ನುವುದು ಟ್ರೈಲರ್ ನೋಡಿದರೆ ಅರ್ಥವಾಗುತ್ತದೆ.
ಜಗ್ಗೇಶ್ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ನ ‘ತೋತಾಪುರಿ’ ಸಿನಿಮಾ ಈಗಾಗಲೇ ಪ್ರೇಕ್ಷಕರ ಮನಗೆದ್ದಿದೆ. ತೋತಾಪುರಿ ಸಿನಿಮಾವನ್ನು ಜನರು ಮೆಚ್ಚಿಕೊಂಡ ಬೆನ್ನಲ್ಲೇ ತೋತಾಪುರಿ 2 ಸಿನಿಮಾವನ್ನು ಟ್ರೈಲರ್ ರಿಲೀಸ್ ಆಗಿದೆ.