‘ದಿ ಗೋಟ್ ಲೈಫ್’ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ

ಬೆಂಗಳೂರು: ಮಲಯಾಳಂನ ನಟ ಪೃಥ್ವಿರಾಜ್ ಸುಕುಮಾರನ್ ನಟನೆಯ ‘ದಿ ಗೋಟ್ ಲೈಫ್’ ‘ದಿ ಎಪಿಕ್ ಟೇಲ್ ಆಫ್ ದಿ ಗ್ರೇಟೆಸ್ಟ್ ಸರ್ವೈವಲ್ ಅಡ್ವೆಂಚರ್’ ಸಿನಿಮಾದ ಮತ್ತೊಂದು ಪೋಸ್ಟರ್ ರಿಲೀಸ್ ಆಗಿದ್ದು, ರಿಲೀಸ್ ಡೇಟ್ ಫಿಕ್ಸ್ ಕೂಡ ಆಗಿದೆ.

ಪೃಥ್ವಿರಾಜ್ ಖಡಕ್ ಆಗಿ ಕಾಣಿಸಿಕೊಂಡಿದ್ದು, ಇಲ್ಲಿ ಅವರು ಹೊಸ ಬಗೆಯ ಪಾತ್ರವನ್ನು ಮಾಡಿದ್ದಾರೆ. 2024ರ ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದು ರಾಷ್ಟ ಪ್ರಶಸ್ತಿ ವಿಜೇತ ಬ್ಲೆಸ್ಸಿ ನಿರ್ದೇಶನದ ಸಿನಿಮಾ ಇದಾಗಿದ್ದು, ವಿಷುಯಲ್ ರೊಮ್ಯಾನ್ಸ್ ನಿರ್ಮಿಸಿದೆ. ಈ ಚಿತ್ರದಲ್ಲಿ ಹಾಲಿವುಡ್ ನಟ ಜಿಮ್ಮಿ ಜೀನ್-ಲೂಯಿಸ್, ಅಮಲಾ ಪೌಲ್, ಭಾರತೀಯ ನಟ ಕೆ.ಆರ್.ಗೋಕುಲ್ ಮತ್ತು ಪ್ರಸಿದ್ಧ ಅರಬ್ ನಟರಾದ ತಾಲಿಬ್ ಅಲ್ ಬಲೂಶಿ ಮತ್ತು ರಿಕಾಬಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎ.ಆರ್.ರೆಹಮಾನ್ ಮತ್ತು ರೆಸುಲ್ ಪೂಕುಟ್ಟಿ ಅವರ ಸಂಗೀತ ನಿರ್ದೇಶನ ಮತ್ತು ಧ್ವನಿ ವಿನ್ಯಾಸವಿದೆ.

ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರ ಮಲಯಾಳಂ ಚಿತ್ರೋದ್ಯಮದ ಅತಿದೊಡ್ಡ ಸಿನಿಮಾ ಎನಿಸಿದೆ.

Font Awesome Icons

Leave a Reply

Your email address will not be published. Required fields are marked *