ಉಡುಪಿ: ನಕ್ಸಲ್ ಚಟುವಟಿಕೆಗಳನ್ನು ಬೇರು ಸಮೇತ ಕಿತ್ತು ಹಾಕಬೇಕು ಎನ್ನುವುದು ರಾಜ್ಯ ಸರ್ಕಾರ ನಿಲುವಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ವಿಕ್ರಂ ಗೌಡ ಎನ್ ಕೌಂಟರ್ ಪ್ರಕರಣದ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪೊಲೀಸರು ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ.
ಕೂಂಬಿಂಗ್ ಕಾರ್ಯಾಚರಣೆ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ . ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇತ್ತು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿ ದಾಳಿ ಮಾಡದಿದ್ದರೆ, ಇಲ್ಲದಿದ್ದರೆ ಪೊಲೀಸರಿಗೆ ಜೀವ ಹಾನಿ ಆಗುವ ಸಂಭವಿತ್ತು ಎಂದರು.
ಎನ್ ಕೌಂಟರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯ ಕೇಳಿಬರುತ್ತಿದೆ. ನ್ಯಾಯಾಂಗ ತನಿಖೆಗೆ ಕೊಡುವುದು ಸರ್ಕಾರದ ತೀರ್ಮಾನ. ಈ ಬಗ್ಗೆ ಮುಖ್ಯಮಂತ್ರಿಗಳು ಗೃಹ ಸಚಿವರ ಬಳಿ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.