ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಚೆನ್ನೈ: ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ, 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ.

ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ.

ಇಎಸ್​ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್​ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್​ನ ಕುರ್ಚಿ, ಪ್ರೊಜೆಕ್ಟರ್​ಗಳನ್ನು ಜಪ್ತಿ ಮಾಡಿದ್ದರು. ಈಗ ಮತ್ತೊಮ್ಮೆ ಜಯಪ್ರದಾ ಅವರಿಗೆ ಹಿನ್ನಡೆ ಆಗಿದೆ.

 

Font Awesome Icons

Leave a Reply

Your email address will not be published. Required fields are marked *