ನವೆಂಬರ್ 4ರ ಬಿಜೆಪಿ ಪ್ರತಿಭಟನೆ ರಾಜಕೀಯ ಪ್ರೇರಿತ- ಸಿಎಂ ಸಿದ್ದರಾಮಯ್ಯ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಅಕ್ಟೋಬರ್ 31,2024 (www.justkannada.in):  ವಕ್ಫ್ ಆಸ್ತಿ ನೋಟೀಸ್ ಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮುಂದಾಗಿರುವುದು ರಾಜಕೀಯಪ್ರೇರಿತವಾದುದು ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು  ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ನವೆಂಬರ್ 4ರ ಅವರ ಪ್ರತಿಭಟನೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ‌ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ  ಮಾಡಿಲ್ಲವೇ? ಎಂದು ಪ್ರಶ್ನಿಸಿದರು.

ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದು ಹೇಳಿದರು.

‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’  ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಶುಭಾಶಯಗಳನ್ನು  ತಿಳಿಸಿದರು.

Key words: November 4,  BJP protest, politically, motivated, CM Siddaramaiah

Font Awesome Icons

Leave a Reply

Your email address will not be published. Required fields are marked *