ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ – News Kannada (ನ್ಯೂಸ್ ಕನ್ನಡ)

ಮಂಡ್ಯ: ರೀಲ್ಸ್‌ ಮಾಡಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ಆಕ್ಟೀವ್‌ ಆಗಿದ್ದ ಶಿಕ್ಷಕಿ ಶವ ಅನುಮಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ಅಲ್ಲದೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾರೋ ದುಷ್ಕರ್ಮಿಗಳು ಕೊಲೆಗೈದು ಮೃತದೇಹ ಹೂತಿಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು ಮೂರೇ ದಿನಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ.

ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಸಂಜೆಯಾದರೂ ಮಗಳು ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ತಂದೆ ವೆಂಕಟೇಷ್‌ ಮೇಲುಕೋಟೆ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.

 

Font Awesome Icons

Leave a Reply

Your email address will not be published. Required fields are marked *