ನಾಲ್ವರ ಬಂಧನ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಕನ್ಯಾನ ನಿವಾಸಿ ಅಬ್ದುಲ್ ರಹಮಾನ್‌ (೨೧),ಅಡ್ಯಾರು ನಿವಾಸಿ ಮಹಮ್ಮದ್ ಸಾದಿಕ್ , ಕಂಬಳಬೆಟ್ಟು ನಿವಾಸಿ ಗೌತಮ್(೨೧), ಕೆಲಿಂಜ ನಿವಾಸಿ ಗುಡ್ಡಪ್ಪ ಗೌಡ ಎಂಬವರು ಆರೋಪಿಗಳಾಗಿದ್ದು, ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನರಿಕೊಂಬು ಗ್ರಾಮದ ನೆಹರೂ ನಗರ ಎಂಬಲ್ಲಿ ವಾಹನ ತಪಾಸಣೆಯಲ್ಲಿ ತೊಡಗಿದ್ದ ವೇಳೆ ವಳಚ್ಚಿಲ್‌ ನೇತ್ರಾವತಿ ನದಿ ಕಿನಾರೆಯಿಂದ ಆರೋಪಿಗಳ ಪರವಾನಿಗೆ ಇಲ್ಲದೆ ಮರಳು ಸಾಗಾಟ ನಡೆಸುತ್ತಿರುವುದು ಗೊತ್ತಾಗಿದೆ.

ಆರೋಪಿಗಳು ನೇತ್ರಾವತಿ ನದಿಯಿಂದ ಪರವಾನಿಗೆಯಿಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಎರಡು ಲಾರಿ ಹಾಗೂ ಮರಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *