ಜೈಪುರ: ನಾಳೆ ಜೈಪುರ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ತಾನ್ ರಾಯಲ್ಸ್ ಮಧ್ಯೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.
ಆರ್ಸಿಬಿ ಇದುವರೆಗೂ ಪ್ರದರ್ಶನದಲ್ಲಿ ಸ್ಥಿರತೆ ತೋರಿಲ್ಲ. 4 ಪಂದ್ಯಗಳಲ್ಲಿ ಕೇವಲ 2 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಹೀನಾಯ ಸೋಲು ಕಂಡಿತ್ತು. ಇದರಿಂದ ನೆಟ್ ರನ್ ರೇಟ್ ಕೂಡ ಹದಗೆಟ್ಟಿದೆ.
ಇನ್ನು, ಆರ್ಸಿಬಿ ಮತ್ತು ರಾಜಸ್ತಾನ್ ನಡುವಿನ ಪಂದ್ಯದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರಾತ್ರಿ ಮ್ಯಾಚ್ ನಡೆಯೋ ಕಾರಣ ಹನಿ ಮಳೆಯಾಗೋ ಸಾಧ್ಯತೆ ಇದೆ. ರಾತ್ರಿ 7 ಗಂಟೆಯಿಂದ 9ರ ನಡುವೆ ಮಳೆ ಬರುವ ಸಾಧ್ಯತೆ ಇದ್ದು, ಪಂದ್ಯ ರದ್ದು ಕೂಡ ಆಗಬಹುದು ಎಂದು ಹೇಳಲಾಗ್ತಿದೆ.