ನಾಳೆ ಇಸ್ರೋಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ:  ಬೆಂಗಳೂರಿನಲ್ಲಿ ಮಾರ್ಗ ಬದಲಾವಣೆ.

ಬೆಂಗಳೂರು,ಆಗಸ್‍,25,2023(www.justkannada.in): ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲು ನಾಳೆ (ಆ.26) ಬೆಂಗಳೂರಿನಲ್ಲಿರುವ ಇಸ್ರೋಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ಹಲವು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ನಾಳೆ ಬೆಳಗ್ಗೆ 4.30ರಿಂದ ಬೆಳಗ್ಗೆ 9.30ರವರೆಗೆ ಸಂಚಾರ ಬದಲಾವಣೆ ಮಾಡಲಾಗಿದ್ದು,  ಹಳೇ ಏರ್​​ಪೋರ್ಟ್​ ರಸ್ತೆ, ಹಳೇ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ(ಮೇಖ್ರಿ ಸರ್ಕಲ್) ಸಿ.ವಿ.ರಾಮನ್ ರಸ್ತೆ, ಯಶವಂತಪುರ ಫ್ಲೈಓವರ್, ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ) ಮಾಗಡಿ ರಸ್ತೆ, ಗೊರಗುಂಟೆ ಪಾಳ್ಯ ಜಂಕ್ಷನ್‌ನಿಂದ ಸುಮನಹಳ್ಳಿ, ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್‌ ರಸ್ತೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ನಾಳೆ ಬೆಳಗ್ಗೆ 4ರಿಂದ ಬೆಳಗ್ಗೆ 11ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಬೆಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ.

Key words: PM- Modi- visit – ISRO- tomorrow-Route change – Bangalore.

The post ನಾಳೆ ಇಸ್ರೋಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ:  ಬೆಂಗಳೂರಿನಲ್ಲಿ ಮಾರ್ಗ ಬದಲಾವಣೆ. appeared first on Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Font Awesome Icons

Leave a Reply

Your email address will not be published. Required fields are marked *