ನಾಳೆ ಮೈಸೂರಿನಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಫೆರಿಫೆರಲ್ ಕ್ಯಾನ್ಸರ್ ಕೇಂದ್ರ ಕಟ್ಟಡ ಕಾಮಗಾರಿಗೆ ಸಿಎಂ ಗುದ್ದಲಿ ಪೂಜೆ.   – Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

ಮೈಸೂರು,ಡಿಸೆಂಬರ್,21,2023(www.justkannada.in): ನಾಳೆ ಮೈಸೂರಿನಲ್ಲಿ ಕಿದ್ವಾಯಿ ಸ್ಮಾರಕ  ಗ್ರಂಥಿ ಸಂಸ್ಥೆಯ ಫೆರಿಫೆರಲ್ ಕ್ಯಾನ್ಸರ್ ಕೇಂದ್ರ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುದ್ದಲಿಪೂಜೆ ಮಾಡಲಿದ್ದಾರೆ ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ತಿಳಿಸಿದರು.

ಜಲದರ್ಶಿನಿಯಲ್ಲಿನ ಶಾಸಕರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಶಾಸಕ ಹರೀಶ್ ಗೌಡ,ಮೈಸೂರು ಭಾಗದ ಜನತೆಯ ಬಹುದಿನಗಳ ಬೇಡಿಕೆ ಈಡೇರುತ್ತಿದೆ. ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಕೊಡಗು ಜಿಲ್ಲೆಗಳಿಗೆ ಈ ಕ್ಯಾನ್ಸರ್ ಆಸ್ಪತ್ರೆಯಿಂದ ಅನುಕೂಲವಾಗಲಿದೆ. ಅಂದಾಜು 49ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣವಾಗಲಿದ್ದು, 18 ತಿಂಗಳಲ್ಲಿ ಕಾಮಗಾರಿ ಸಂಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಮೈಸೂರಿನಿಂದ ಪ್ರತಿನಿತ್ಯ 10ಸಾವಿರಕ್ಕೂ ಹೆಚ್ಚು ಜನ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನೋಂದಣಿಯಾಗುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೂ 10 ಸಾವಿರ ಜನ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಈ ಭಾಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣವಾಗುತ್ತಿರುವುದರಿಂದ ಕ್ಯಾನ್ಸರ್ ರೋಗಿಗಳು ಬೆಂಗಳೂರಿಗೆ ಅಲೆಯುವುದು ತಪ್ಪಲಿದೆ ಎಂದು ಶಾಸಕ ಕೆ ಹರೀಶ್ ಗೌಡ ಹೇಳಿದರು.

ಈ ವೇಳೆ ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಮೈಸೂರು ಮೆಡಿಕಲ್ ಕಾಲೇಜು ಡೀನ್ ಡಾ. ದಾಕ್ಷಾಯಿಣಿ, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಡೀನ್ ಡಾ. ಲೋಕೇಶ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

Key words: CM – construction work – Feriferal Cancer Center – Mysore- tomorrow.

Font Awesome Icons

Leave a Reply

Your email address will not be published. Required fields are marked *