ನಾಳೆ ರಾಜ್ಯದಲ್ಲಿ ‘ಸರ್ಕಾರಿ ರಜೆ’ ಇಲ್ಲ: ಸಿಎಂ ಸಿದ್ದು ಸ್ಪಷ್ಟನೆ

ತಮಕೂರು: ನಾಳೆ (ಜ.22) ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ(ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ. ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪ್ರಕಟಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾಳೆ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ. ನಾಳೆ ಮುಜರಾಯಿ ದೇಗುಲಗಳಲ್ಲಿ ದಾಸೋಹ, ಪಾನಕ-ಫಲಹಾರ ವ್ಯವಸ್ಥೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ಇನ್ನು ಇತ್ತ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ದಿನ ರಾಜ್ಯದಲ್ಲಿ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಆಗ್ರಹಿಸಿದ್ದಾರೆ. ಈ ಸಂಬಂಧ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಹಿಂದೂಪರ ಸಂಘಟನೆಗಳು, ಬೆಂಗಳೂರು ವಕೀಲರ ಸಂಘವು ಸಹ ರಜೆ ನೀಡುವಂತೆ ಮನವಿ ಮಾಡಿತ್ತು. ಆದ್ರೆ, ಇದೀಗ ಅಂತಿಮವಾಗಿ ಸಿದ್ದರಾಮಯ್ಯನವರು ರಜೆ ಘೋಷಣೆ ಮಾಡುವುದಿಲ್ಲ ಎಂದು ತಮ್ಮ ನಿಲುವು ಪ್ರಕಟಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *