ಉಡುಪಿ: ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಣಾಮ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ66ರಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಮೃತರನ್ನು ಉದ್ಯಾವರ ಸಂಪಿಗೆನಗರದ ನಿವಾಸಿ ರೊಬರ್ಟ್ ಕ್ಯಾಸ್ಟಲಿನೋ ಅವರ ಪುತ್ರ, ಉದ್ಯಾವರ ಐಸಿವೈಎಂ ಅಧ್ಯಕ್ಷ ಜೋಯಿಸ್ಟನ್ ಕ್ಯಾಸ್ಟಲಿನೋ(22) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಉದ್ಯಾವರ ಐಸಿವೈಎಂ ಘಟಕದ ಸದಸ್ಯರಾದ ಲೆಸ್ಟನ್ ಪಿಂಟೋ(22), ಜಸ್ಟಿನ್ ಕರ್ಡೊಜ (22), ವಿಲ್ಸನ್ ಮಾರ್ಟಿಸ್(23), ಗ್ಲಾಡ್‌ನ್ ಡಿಸಿಲ್ವ (23) ಗಾಯಗೊಂಡಿದ್ದಾರೆ. ಇವರು ನಾಲ್ವರು ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಉಡುಪಿ ಕಡೆ ಬರುತ್ತಿರುವಾಗ ಕೋಟೇಶ್ವರ ಬಳಿ ಕೆಟ್ಟು ನಿಂತಿದ್ದ ಟ್ರಕ್‌ಗೆ ಫಿಗೋ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.