ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿಯಾದ ಬೈಕ್‌ : ಓರ್ವ ಸಾವು

ಬೆಳಗಾವಿ:   ನ್ಯೂ ಇಯರ್  ವೇಳೆ ಎಣ್ಣೆ ಪಾರ್ಟಿ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಬೈಕ್ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದ ಪಂಕಜ್ ಮೃತ ಯುವಕ ಎಂದು ಗುರುತಿಸಲಾಗಿದೆ. ಇನ್ನೋರ್ವ ಯುವಕ ಸಂತೋಷ್ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸವರ್ಷದ ಪಾರ್ಟಿಗೆಂದು ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳಿದ್ದರು. ಕುಡಿದ ಮತ್ತಿನಲ್ಲೇ ಬೈಕ್ ಚಾಲನೆ ಮಾಡಿಕೊಂಡು ಬಂದಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿಯಾಗಿರುವ ಬೈಕ್. ಡಿಕ್ಕಿಯಾದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಯುವಕ ಪಂಕಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Font Awesome Icons

Leave a Reply

Your email address will not be published. Required fields are marked *