ನಿರ್ದೇಶಕ ವಿಆರ್​ ಭಾಸ್ಕರ್​ ಅನಾರೋಗ್ಯದಿಂದ ನಿಧನ

ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಿರ್ದೇಶಕ, ಸಂಭಾಷಣಕಾರ, ಗೀತ ಸಾಹಿತಿ ವಿ.ಆರ್​. ಭಾಸ್ಕರ್​ ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಅವರು ಮೈಸೂರಿನಲ್ಲಿ ಇಂದು (ಸೆ.14) ವಿಧಿವಶರಾಗಿದ್ದಾರೆ. ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದ ಭಾಸ್ಕರ್​ ಅವರು ಡಾ. ವಿಷ್ಣುವರ್ಧನ್​ ಅವರ ಜೊತೆ ಒಡನಾಟ ಹೊಂದಿದ್ದರು.

ನಟನಾಗಿಯೂ ಅವರು ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ವಿ.ಆರ್​. ಭಾಸ್ಕರ್​ ಅವರ ಜೀವನದಲ್ಲಿ ಕಷ್ಟ ಆವರಿಸಿತ್ತು. ಕೆಲವೇ ದಿನಗಳ ಹಿಂದೆ ಪತ್ನಿ ಮತ್ತು ಮಗನನ್ನು ಕೂಡ ಅವರು ಅನಾರೋಗ್ಯದಿಂದ ಕಳೆದುಕೊಂಡಿದ್ದರು. ಮೈಸೂರಿನಲ್ಲೇ ವಿ.ಆರ್​. ಭಾಸ್ಕರ್​ ಅಂತ್ಯಕ್ರಿಯೆ ನಡೆಯಲಿದೆ.

ವಿ.ಆರ್​. ಭಾಸ್ಕರ್ ಅವರಿಗೆ 60 ವರ್ಷಕ್ಕೂ ಹೆಚ್ಚು ವಯಸ್ಸಾಗಿತ್ತು. ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದ ಅವರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹಾಗಿದ್ದರೂ ಕೂಡ ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರು ಎಳೆದಿದ್ದಾರೆ. ಅವರ ತಾಯಿಯು ಚಾಮುಂಡಿ ಬೆಟ್ಟದ ಬಳಿ ಇರುವ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯಕ್ರಿಯೆ ನಡೆಸಲಿದ್ದಾರೆ.

 

 

Font Awesome Icons

Leave a Reply

Your email address will not be published. Required fields are marked *