ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರ ಸ್ವೀಕಾರ

ಧಾರವಾಡ: ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ದಿವ್ಯಪ್ರಭು ಜಿ.ಆರ್.ಜೆ ಅವರು ಅಧಿಕಾರ ಸ್ವೀಕರಿಸಿದರು.

ಧಾರವಾಡ ಜಿಲ್ಲಾಧಿಕಾರಿಗಳಾಗಿದ್ದ ಗುರುದತ್ತ ಹೆಗಡೆ ಅವರು ಬೆಂಗಳೂರಿಗೆ ವರ್ಗಾವಣೆ ಆಗಿದ್ದು, ಅವರ ಸ್ಥಳಕ್ಕೆ ಹಿರಿಯ ಐಎಎಸ್ ಅಧಿಕಾರಿ ದಿವ್ಯಪ್ರಭು ಜೆ.ಆರ್.ಜಿ ಅವರನ್ನು ನೇಮಕಗೊಳಿಸಿ, ಸರ್ಕಾರ ನಿನ್ನೆ ಆದೇಶ ಹೊರಡಿಸಿತ್ತು.

ತಮಿಳುನಾಡು ಮೂಲದ ದಿವ್ಯಪ್ರಭು ಅವರು 2014 ನೇ ಸಾಲಿನ ಐಎಎಸ್ ಅಧಿಕಾರಿ ಆಗಿದ್ದು, ಈಗಾಗಲೇ ವಿವಿಧ ಆಡಳಿತಾತ್ಮಕ ಹುದ್ದೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಉಪ ವಿಭಾಗಾಧಿಕಾರಿಯಾಗಿ ಸೇವೆ ಆರಂಭಿಸಿರುವ ಇವರು, ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರಾಗಿ, ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *