ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿಗೆ ಖನಿಜ ಪ್ರತಿಷ್ಠಾನ ನಿಧಿಯಿಂದ 8 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಹೇಮಚಂದ್ರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಭವಾನಿ ಶ್ರೀಯಾನ್, ಶೋಭಾ ಶೆಟ್ಟಿ, ಸಂದೇಶ್ ಶೆಟ್ಟಿ, ಅಶೋಕ್ ಪೂಜಾರಿ, ಹರೀಶ್ ಶೆಟ್ಟಿ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಸುಬ್ರಮಣ್ಯ ರಾವ್ ಉಪಸ್ಥಿತರಿದ್ದರು.

Font Awesome Icons

Leave a Reply

Your email address will not be published. Required fields are marked *