ಪಾಕ್ ಪರ‌ ಘೋಷಣೆ ಖಂಡಿಸಿ ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆ

ಮಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ‌ ಘೋಷಣೆ ಕೂಗಿದ ಪ್ರಕರಣ ಖಂಡಿಸಿ ನಗರದ ಕದ್ರಿ ಮಲ್ಲಿಕಟ್ಟೆ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆ ನಡೆಸಿತು.

ಈ ವೇಳೆ ರಾಜ್ಯ ಸರಕಾರ, ನಾಸಿರ್ ಹುಸೈನ್ ವಿರುದ್ಧ ವಿ ಎಚ್ ಪಿ , ಬಜರಂಗದಳ ಕಾರ್ಯಕರ್ತರು ಘೋಷಣೆ ಕೂಗಿ, ರಾಷ್ಟ್ರ ದ್ರೋಹಿಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯ ಮಾಡಿದರು. ಇನ್ನು ಈ ವೇಳೆ ನಾಸೀರ್ ಹುಸೈನ್ ಪ್ರತಿಕೃತಿ ಧಹಿಸಿ ವಿ ಎಚ್ ಪಿ‌ , ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *