ಪಾಳುಬಿದ್ದ ಮನೆಯಲ್ಲಿ ನಿಗೂಢ ಐದು ಅಸ್ಥಿಪಂಜರ ಪತ್ತೆ

ಚಿತ್ರದುರ್ಗ: ನಗರದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ ಆಗಿವೆ. ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಮನೆಯಲ್ಲಿ ಪವನ್ ಕುಮಾರ್ ಸಂಬಂಧಿ ಜಗನ್ನಾಥರೆಡ್ಡಿ ಮತ್ತು ಕುಟುಂಬ ವಾಸವಾಗಿದ್ದರು. ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ, ನರೇಂದ್ರರೆಡ್ಡಿ ವಾಸವಾಗಿದ್ದರು. ಸ್ಥಳೀಯರೊಬ್ಬರು ನೀಡಿದ ಮಾಹಿತಿ ಅಧರಿಸಿ ಪೊಲೀಸರು ಪಾಳುಬಿದ್ದ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಈ ಅಸ್ಥಿಪಂಜರಗಳು ಸಿಕ್ಕಿವೆ. ಸ್ಥಳಕ್ಕೆ ಡಿವೈಎಸ್‌ಪಿ ಪಿ.ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳಿಸಲಾಗಿದೆ.

ಮೃತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಇಲ್ಲವೇ ಕೊಲೆಯಾಗಿದ್ದಾರೆಯೇ? ಎಂಬುವುದರ ಕುರಿತು ಇನ್ನಷ್ಟೇ ತಿಳಿಯಬೇಕಿದೆ.

Font Awesome Icons

Leave a Reply

Your email address will not be published. Required fields are marked *