ಬೆಳಗಾವಿ: ಭಿಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವನ್ನಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ಸಾವನ್ನಪ್ಪಿದ್ದಾರೆ. ಹೆಲ್ಮೆಟ್ ಧರಿಸದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ್ ಅವರು ಎಲ್ಲ ಪೊಲೀಸರು ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿದ್ದರು. ಆದರೆ ಇವರ ನಿರ್ಲಕ್ಷಣೆ ಸಾವು ಸಂಭವಿಸಿದೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಮೇಲಾಧಿಕಾರಿಗಳ ನಿರ್ದೇಶನ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯ ಆರೋಪದ ಮೇರೆಗೆ ದೊಡವಾಡ ಠಾಣೆ ಪಿಎಸ್ಐ ನಂದೀಶ್ ಅಮಾನತು ಮಾಡಿ ಎಸ್ಪಿ ಆದೇಶಿಸಿದ್ದಾರೆ.