ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ: ಯು.ಟಿ ಖಾದರ್

ಉಡುಪಿ: ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ ಎಂದು ವಿಧಾನಸಭೆ ಸಭಾಪತಿ ಯು.ಟಿ ಖಾದರ್ ಹೇಳಿದರು.

ಅವರು ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ದರ್ಬಾರ್‌ನಲ್ಲಿ ಪಾಲ್ಗೊಂಡು ಮಾತನಾಡಿ, ಧಾರ್ಮಿಕ ಕೇಂದ್ರಗಳಿಗೆ ಸಮಾಜವನ್ನು ತಿದ್ದುವ ಶಕ್ತಿಯಿದೆ. ಸಮಾಜ ಒಡೆದು ಹೋಗುವ ಸಂದರ್ಭದಲ್ಲಿ ಮಠಾಧೀಶರು ಜೋಡಿಸಬೇಕು. ಪುತ್ತಿಗೆ ಶ್ರೀಗಳು ಧಾರ್ಮಿಕವಾಗಿ ದೇಶ-ವಿದೇಶದಲ್ಲಿ ತೊಡಗಿಸಿಕೊಂಡವರು ಎಂದು ಹೇಳಿದರು.

ರಾಜ್ಯ, ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು. ಹಿಂದಿನಿಂದಲೂ ನಾನು ಕೃಷ್ಣ ಮಠಕ್ಕೆ ಸಂಬಂಧಪಟ್ಟ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ ಎಂದು ಹೇಳಿದರು.

Font Awesome Icons

Leave a Reply

Your email address will not be published. Required fields are marked *