ಪೊಲೀಸ್ ಠಾಣೆ ಆವರಣದಲ್ಲಿ ಅನುಮಾನಾಸ್ಪವಾಗಿ ಕೊಳೆತ ಶವ ಪತ್ತೆ

ಬೆಳಗಾವಿ: ಜಿಲ್ಲೆಯ ಪೊಲೀಸ್ ಠಾಣೆ ಆವರಣದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಅಂದಾಜು 40-45ವರ್ಷದ ವ್ಯಕ್ತಿಯ ಶವಪತ್ತೆಯಾಗಿದೆ.ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅಂದಾಜು 40-45 ವರ್ಷದ ವ್ಯಕ್ತಿಯ ಮೃತದೇಹ ಎಂದು ಅಂದಾಜಿಸಲಾಗಿದೆ. ಕಳೆದ ಹದಿನೈದು ದಿನಗಳ ಹಿಂದೆಯೇ ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ.

ನಂತರ ಸ್ಥಳಕ್ಕೆ ಕ್ಯಾಂಪ್‌ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇದು ಕೊಲೆಯೋ ಅಥವಾ ಅಸಹಜವೋ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.ಜಿಲ್ಲೆಯಲ್ಲಿ ಭಿಕ್ಷೆ ಬೇಡುತ್ತಿದ್ದ ಅಪರಿಚಿತ ವ್ಯಕ್ತಿ ಪೊಲೀಸ್ ಠಾಣಾ ಆವರಣದಲ್ಲಿ ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್‌ನ ಹಿಂಬದಿ ಸೀಟ್ ನಲ್ಲಿ ಕುಳಿತಿರುವಾಗಲೇ ಜೀವ ಹೋಗಿದ್ದು 10 ದಿನದ ಬಳಿಕ ಮೃತ ದೇಹ ಪತ್ತೆಯಾಗಿದೆ. ದೇಹ ಕೊಳೆತು ವಾಸನೆ ಬಂದ ಕಾರಣ ಸಿಬ್ಬಂದಿ ಸ್ಥಳಕ್ಕೆ ಹೋಗಿ ನೋಡಿದಾಗ ಶವ ಇರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಕೊಳೆತ ಕಾರಣ ಇನ್ನು ವ್ಯಕ್ತಿಯ ಗುರುತು ಸಿಕ್ಕಿಲ್ಲ.

ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಕ್ಯಾಂಪ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Font Awesome Icons

Leave a Reply

Your email address will not be published. Required fields are marked *