ಪ್ರಣಾಳಿಕೆಯಲ್ಲಿ ಸಿಎಎ ಬಗ್ಗೆ ಉಲ್ಲೇಖವಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಪಿಣರಾಯಿ

ತಿರುವನಂತಪುರಂ: ಲೋಕಸಭಾ ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಯಾವುದೇ ಉಲ್ಲೇಖ ಮಾಡದ್ದಕ್ಕೆ ಕಾಂಗ್ರೆಸ್‌ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ.

ಕೊಲ್ಲಂನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ಸೇರಿ, ಸಂವಿಧಾನವನ್ನು ಉಲ್ಲಂಘಿಸಿ ಜಾರಿಗೆ ತರಲಾದ ಹಲವು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್‌ ಹೇಳಿದೆ. ಆದರೆ ಸಿಎಎ ಬಗ್ಗೆ ಒಂದು ಶಬ್ದವನ್ನೂ ಉಲ್ಲೇಖಿಸಿಲ್ಲ ಎಂದು ಕಿಡಿಕಾರಿದರು.

ಉದ್ದೇಶಪೂರ್ವಕವಾಗಿಯೇ ಸಿಎಎಯನ್ನು ಹೊರಗಿಡಲಾಗಿದೆ. ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್‌ಗೆ ಇರುವ ಭಯವನ್ನು ಇದು ತೋರಿಸುತ್ತದೆ ಎಂದು ದೂರಿದರು.

 

Font Awesome Icons

Leave a Reply

Your email address will not be published. Required fields are marked *