ಪ್ರಲ್ಹಾದ್​​ ಜೋಶಿ ಸಿದ್ದರಾಮಯ್ಯನವರ ಬಳಿ ಕ್ಷಮೆ ಕೇಳಲಿ: ಸಂತೋಷ್ ಲಾಡ್

ಧಾರವಾಡ: ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ ವಿಚಾರವಾಗಿ ಮಾತನಾಡಿದ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ‘ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ’ ಎಂದು  ಹೇಳಿದ್ದಾರೆ.

ಇತ್ತೀಚೆಗೆ ಹಾರಿಕೊಂಡು ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿಲ್ಲ, ಅವರು ಸಾಮಾಜಿಕ ಹೋರಾಟದ ಹಿನ್ನೆಲೆಯಿಂದ ಬಂದವರು. ಅಂಬೇಡ್ಕರ್, ಬಸವ, ಬುದ್ಧನ ತತ್ವ ಸಿದ್ಧಾಂತದ ಮೇಲೆ ಇರುವವರು. 50 ವರ್ಷ ರಾಜ್ಯ ರಾಜಕಾರಣದಲ್ಲಿ ಇದ್ದವರು, 2 ಸಲ ಸಿಎಂ ಆದವರು. ಇಂಥವರ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಹೇಳಿಕೆ ಸರಿಯಲ್ಲ, ಸಮಂಜಸವೂ ಅಲ್ಲ ಎಂದು ಕಿಡಿಕಾರಿದ್ದಾರೆ.

ಶ್ರೀಕಾಂತ ಪೂಜಾರಿ ವಿರುದ್ಧ ವಾಗ್ದಾಳಿ: ಶ್ರೀಕಾಂತ್ ಪೂಜಾರಿ ಪರಮವೀರ ಚಕ್ರ ವಿಜೇತರಾ? ನೊಬೆಲ್ ಪ್ರಶಸ್ತಿ ಪುರಸ್ಕೃತರಾ?, ಅವರೇನು ಗೋಲ್ಡ್ ಮೆಡಲಿಸ್ಟಾ? ಶ್ರೀಕಾಂತ್ ಪೂಜಾರಿ ವಿರುದ್ಧ ಸಾಕಷ್ಟು ಕೇಸ್‌ಗಳಿವೆ. ಶ್ರೀಕಾಂತ್ ವಿಚಾರವನ್ನ ರಾಷ್ಟ್ರ ಮಟ್ಟಕೆ ತೆಗೆದುಕೊಂಡು ಹೊರಟಿದ್ದಾರೆ. ಇದೇನಾ ನಿಮ್ಮ ಹಿಂದುತ್ವ ಎಂದು ಬಿಜೆಪಿ ನಾಯಕರ ವಿರುದ್ಧ ಲಾಡ್ ವಾಗ್ದಾಳಿ ಲಾಡ್ ಮಾಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *