ಪ್ರಶಾಂತ್​ ನೀಲ್​, ಜೂ. ಎನ್​ಟಿಆರ್​ ಚಿತ್ರದ ಬಗ್ಗೆ ಗುಡ್‌ ನ್ಯೂಸ್‌

ನಿರ್ದೇಶಕ ಪ್ರಶಾಂತ್​ ನೀಲ್​ ಮತ್ತು ನಟ ಜೂನಿಯರ್​ ಎನ್​ಟಿಆರ್​ ಅವರು ಒಟ್ಟಾಗಿ ಸಿನಿಮಾ ಮಾಡುತ್ತಾರೆ ಎಂಬ ಬಗ್ಗೆ ಬಹಳ ಹಿಂದೆಯೇ ಮಾಹಿತಿ ಸಿಕ್ಕಿತ್ತು. ಆದರೆ ಇದರ ಆಪ್‌ ಡೇಟ್‌ ಸಿಕ್ಕಿರಲಿಲ್ಲ. ಅದಕ್ಕೆ ಈಗ ನಿರ್ಮಾಪಕರಿಂದಲೇ ಅಧಿಕೃತ ಮಾಹಿತಿ ಹೊರಬಿದ್ದಿದೆ. ಈ ಸಿನಿಮಾಗೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಶೂಟಿಂಗ್​ 2024ರ ಏಪ್ರಿಲ್​ನಲ್ಲಿ ಶುರುವಾಗಲಿದೆ ಎಂದು ಈ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆ ಮೂಲಕ ಪೋಸ್ಟ್​ ಮಾಡಲಾಗಿದೆ.

ಈ ಸುದ್ದಿ ಕೇಳಿ ಜೂನಿಯರ್​ ಎನ್​ಟಿಆರ್​ ಮತ್ತು ಪ್ರಶಾಂತ್​ ನೀಲ್​ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.‘ಇದು ಭಾರತೀಯ ಸಿನಿಮಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಲಿದೆ’ ಎಂಬ ಕ್ಯಾಪ್ಷನ್​ನೊಂದಿಗೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ಈ ಸುದ್ದಿಯನ್ನು ಹಂಚಿಕೊಂಡಿದೆ. ಆ ಮೂಲಕ ನಿರೀಕ್ಷೆ ಹೆಚ್ಚಿಸುವ ಕೆಲಸ ಮಾಡಲಾಗಿದೆ.

Font Awesome Icons

Leave a Reply

Your email address will not be published. Required fields are marked *