ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಓರ್ವ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಚಿತ್ರದುರ್ಗ ತಾಲೂಕಿನ ವಿಜಾಪುರ ಗೊಲ್ಲರಹಟ್ಟಿ ಬಳಿ ಈ ದುರ್ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿ ವಿಜಾಪುರ ಗೊಲ್ಲರಹಟ್ಟಿ ಗ್ರಾಮದ 19 ವರ್ಷದ ಸುಚಿತ್ರ ಎಂದು ಗುರುತಿಸಲಾಗಿದೆ. ಈಕೆ ಲಾರಿ ಡಿಕ್ಕಿ ಹೊಡೆತಕ್ಕೆ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಹಾರಿ ಬಿದ್ದು ಅಲ್ಲೇ ಮೃತಪಟ್ಟಿದ್ದಾಳೆ.

ಗೊಲ್ಲರಹಟ್ಟಿ ಬಳಿ ಕಾಲೇಜಿಗೆ ಹೋಗಲು 3 ಜನ ವಿದ್ಯಾರ್ಥಿನಿಯರು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಲಾರಿ ಡಿಕ್ಕಿ ಹೊಡೆದಿದೆ.  ಘಟನಾ ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *