ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ ಚಾಲಕ-ಕಂ-ನಿರ್ವಾಹಕ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಶಿವಮೊಗ್ಗ: ಶಿವಮೊಗ್ಗ ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ  ನಡೆದಿದೆ.

ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ-ಕಂ-ನಿರ್ವಾಹಕ.

ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಈ ವಿಚಾರ ಮೇಲಿನ ಅಧಿಕಾರಿಗಳಿಗೂ ತಿಳಿದಿತ್ತು.

ಮೇಲಿನ ಅಧಿಕಾರಿಗಳ ಬೆಂಬಲದೊಂದಿಗೆ ಕೆ. ರೇಣುಕಾ ಅವರು ಬಸವರಾಜು ಟಿ.ವಿ ಮತ್ತು ಮತ್ತೋರ್ವ ಚಾಲಕ ಸಿ. ಮಹೇಶ್ವರ ವಿರುದ್ಧ ಹೊನ್ನಾಳಿ ಪೋಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ದೂರು ನೀಡಿದ್ದು, ಎಫ್​ಐಆರ್ ದಾಖಲಾಗಿದೆ.

ಎಫ್​ಐಆರ್​​ ದಾಖಲಾಗುತ್ತಿದ್ದಂತೆ ಬಸವರಾಜು ಟಿ.ವಿ ​ಶಿವಮೊಗ್ಗ ವಿಭಾಗೀಯ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಆದರೆ ಶಿವಮೊಗ್ಗ ವಿಭಾಗದ ಅಧಿಕಾರಿಗಳು ಚಾಲಕ ಬಸವರಾಜು ಅವರಿಗೆ ಸ್ಪಂದಿಸಿಲ್ಲ. ಇದರಿಂದ ನೊಂದ ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆ ಯತ್ನಿಸಿದ್ದಾರೆ.

ನನ್ನ ಸಾವಿಗೆ ಶಿವಮೊಗ್ಗ ವಿಭಾಗದ ಅಧಿಕಾರಿಗಳು ಹಾಗೂ ಮೆಕ್ಯಾನಿಕ್ ಕೆ. ರೇಣುಕಾ ಕಾರಣವೆಂದು ಬಸವರಾಜು ಟಿ.ವಿ ಡೆತ್ ನೋಟ್ ಬರೆದಿದ್ದಾರೆ.

ವಿಚಾರ ತಿಳಿದು ಅಕ್ಕ-ಪಕ್ಕದಲ್ಲಿದ್ದ ಸಿಬ್ಬಂದಿ ಅವರನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Font Awesome Icons

Leave a Reply

Your email address will not be published. Required fields are marked *